Karnataka NewsLatest

*ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ; ಸಂಚಾರ ಸಂಪೂರ್ಣ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಜೊರಾಗಿದ್ದು, ಗುಡ್ಡ ಕುಸಿತ, ಭೂ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ ಶಿರಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ.

ಮೂರು ದಿನಗಳ ಹಿಂದೆ ಚಲಿಸುತ್ತಿದ್ದ ವಾಹನಗಳ ಮೇಲೆ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿತ್ತು. ಇದರ ಬೆನ್ನಲ್ಲೇ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಮಣ್ಣು ತೆರವುಗೊಳಿಸಿ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೆ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿದೆ.

Home add -Advt

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ರಸ್ತೆಯ ದೊಡ್ಡ ತಪ್ಲು ಬಳಿ ಮತ್ತೆ ಭೂ ಕುಸಿತವಾಗಿದ್ದು, ವಾಹನ ಸಂಚಾರ ಬಂದ್ ಆಗಿದೆ. ಮೊನ್ನೆ ಸಂಭವಿಸಿದ ಭೂ ಕುಸಿತದ ಜಾಗದಲ್ಲಿಯೇ ಮತ್ತೆ ಭೂ ಕುಸಿತವಾಗಿದೆ.

Related Articles

Back to top button