Kannada NewsKarnataka NewsNationalPolitics

*ಭುಗಿಲೆದ್ದ ರೈತರ ಆಕ್ರೋಶ: ಮೂರು ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಆಕ್ರೋಶ ತೀವ್ರ ಸ್ವರೂಪ ಪಡೆದಿದ್ದು, ಮುಧೋಳ, ಜಮಖಂಡಿ ಮತ್ತು ರಬಕವಿ ತಾಲೂಕುಗಳಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ. 

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸೈದಾಪುರದಲ್ಲಿರುವ ಗೋದಾವರಿ ಸಕ್ಕರೆ ಕಾರ್ಖಾನೆ ಬಳಿ ಈ ಘಟನೆ ನಡೆದಿದೆ. ಕಲ್ಲು ಬಿದ್ದ ಪರಿಣಾಮ ಎಎಸ್‌ಪಿ ಮಹಾಂತೇಶ ಜಿದ್ದಿ ಅವರ ಕಾಲಿನ ಮೂಳೆ ಮುರಿದಿದ್ದು, ತಕ್ಷಣ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಬ್ಬು ಬೆಳೆಗಾರರ ಹೋರಾಟ ಹಿಂಸಾತ್ಮಕ ಸ್ವರೂಪ ಪಡೆದು ಕೈಮೀರಿದ ಹಿನ್ನೆಲೆಯಲ್ಲಿ, ಪರಿಸ್ಥಿತಿ ನಿಯಂತ್ರಿಸಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಧೋಳ, ಜಮಖಂಡಿ ಮತ್ತು ರಬಕವಿ ತಾಲೂಕುಗಳಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ. 

ಇದೇ ವೇಳೆ, ಸಮೀರವಾಡಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 50ಕ್ಕೂ ಹೆಚ್ಚು ಕಬ್ಬಿನ ಟ್ರ್ಯಾಕ್ಟರ್‌ಗಳು ಬೆಂಕಿಗೆ ಆಹುತಿಯಾಗಿವೆ. ಮುಧೋಳದ ರಾಯಣ್ಣ ಸರ್ಕಲ್‌ನಿಂದ ಹೊರಟ ಪ್ರತಿಭಟನಾಕಾರರು ಸಮೀರವಾಡಿ ಸಕ್ಕರೆ ಕಾರ್ಖಾನೆಗೆ ನುಗ್ಗಿ ಭಾರಿ ದಾಂಧಲೆ ನಡೆಸಿದ್ದಾರೆ.

Home add -Advt

Related Articles

Back to top button