Belagavi NewsBelgaum NewsKannada NewsKarnataka News

*ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶಗೊಂಡ ರೈತರು: ಹೆದ್ದಾರಿ ತಡೆದು ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾಧಿಕಾರಿಗಳು ಭರವಸೆ ಈಡೇರಿಸಿಲ್ಲ ಎಂದು ಆಕ್ರೋಶಗೊಂಡ ರೈತರು ಸವದತ್ತಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಸಮೀಪ ಸವದತ್ತಿ, ನರಗುಂದ, ನವಲಗುಂದ ಭಾಗದ  ನೂರಾರು ರೈತರು ಸಿಂಧನೂರು–ಹೆಮ್ಮಡಗಾ ರಾಜ್ಯ ಹೆದ್ದಾರಿಯನ್ನು ತಡೆದು ಭಾರಿ ಪ್ರತಿಭಟನೆ ನಡೆಸಿದರು. 

Related Articles
Home add -Advt

ಮಲಪ್ರಭಾ ನದಿಯ ನೀರನ್ನು ಕಾಲುವೆಗೆ ಹರಿಸಿ, ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು. ಕಳೆದ ಹತ್ತು ದಿನಗಳ ಹಿಂದೆ 2 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರು‌. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಸವದತ್ತಿ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಹಾಗೂ ನೀರಾವರಿ ಇಲಾಖೆಯ ಅಧಿಕಾರಿ ಮನೋಹರ ಬಿಸ್ನಾಳ ಭೇಟಿ ನೀಡಿ ರೈತರನ್ನು ಮನವೊಲಿಸಲು ಪ್ರಯತ್ನಿಸಿದರು. 

ಆದರೆ ಅಧಿಕಾರಿಗಳ ಮನವಿಗೆ ರೈತರು ಒಪ್ಪದೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು. ಕಾಲುವೆಗೆ ನೀರು ಹರಿಸುವವರೆಗೆ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದರು. 

ಈ ಪ್ರತಿಭಟನೆಯಿಂದ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಸಂಚಾರ ದಟ್ಟಣೆ ಉಂಟಾಯಿತು.

Related Articles

Back to top button