Kannada NewsKarnataka NewsNationalPolitics
*ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರ ಒತ್ತಾಯ: ಮಹತ್ವದ ಸಭೆ ನಡೆಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ.
ಸಚಿವರಾದ ಎಚ್ ಕೆ ಪಾಟೀಲ್, ಕೆ ಎಚ್ ಮುನಿಯಪ್ಪ, ಶಿವಾನಂದ ಪಾಟೀಲ, ಕೆ, ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.
ಕೃಷಿ ಸಚಿವರಾದ ಚಲುವರಾಯಸ್ವಾಮಿಯವರು ದೆಹಲಿಯಲ್ಲಿದ್ದು ಆನ್ ಲೈನ್ ಮೂಲಕ ಸಭೆಗೆ ಸೇರ್ಪಡೆಗೊಂಡಿದ್ದಾರೆ.
ರಾತ್ರಿ ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿ ಮೆಕ್ಕೆಜೋಳ ರೈತರ ಸಮಸ್ಯೆ ಬಗ್ಗೆ ವಿವರಿಸಿ ನೆರವು ಕೇಳಿರುವುದಾಗಿ ಸಚಿವ ಚಲುವರಾಯಸ್ವಾಮಿಯವರು ಸಭೆಗೆ ವಿವರಿಸಿದರು.



