*ಕಬ್ಬಿಗೆ ದರ ನಿಗದಿಗೆ ರೈತರ ಪಟ್ಟು: ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಮತ್ತಷ್ಟು ಹೆಚ್ಚಾಗಿದ್ದು, ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕೆಂದು ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಳಗಾವಿಯಲ್ಲಿ ರೈತರಿಂದ ತೀವ್ರ ಬೆಂಬಲ ವ್ಯಕ್ತವಾಗಿದೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಬೆಳಗಾವಿ ನಗರದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಆಗಮಿಸಿದ ರೈತ ಮುಖಂಡರು ಹಾಗೂ ಪ್ರತಿಭಟನಾಕಾರರು ಬಸ್ ಸಂಚಾರವನ್ನು ತಡೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. … Continue reading *ಕಬ್ಬಿಗೆ ದರ ನಿಗದಿಗೆ ರೈತರ ಪಟ್ಟು: ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ತಡೆದು ಪ್ರತಿಭಟನೆ*