Belagavi NewsBelgaum NewsKannada NewsKarnataka NewsLatestPolitics

*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ; ರೈತರ ಜಮೀನು ಬಾಡಿಗೆ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನ ಮಂಡಳದ ಅಧಿವೇಶನದ ಸಂದರ್ಭದಲ್ಲಿ ನಡೆಯಲಿರುವ ವಿವಿಧ ಪ್ರತಿಭಟನೆಗಳಿಗೆ ಬಳಸಲಾಗುವ ರೈತರ ಜಮೀನಿನ ಬಾಡಿಗೆಯನ್ನು ಹೆಚ್ಚಳ ಮಾಡಲಾಗಿದೆ.

ರೈತರ ಮನವಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕಳೆದ ವರ್ಷ ಪ್ರತಿಭಟನೆಯ ಟೆಂಟ್ ನಿರ್ಮಾಣಕ್ಕೆ ಬಳಸಲಾಗಿದ್ದ ರೈತರ ಜಮೀನಿಗೆ ಪ್ರತಿ ಗುಂಟೆಗೆ ರೂ. 1200 ನೀಡಲಾಗಿತ್ತು. ಆ ಜಮೀನಿನಲ್ಲಿ ಯಾವುದೇ ಫಸಲು ಬೆಳೆದಿರಲಿಲ್ಲ.


ಈ ಬಾರಿ ಹಲಗಾ ಗ್ರಾಮದ ರೈತರ 3.28 ಎಕರೆ ಜಮೀನನ್ನು ಪ್ರತಿಭಟನಾ ಟೆಂಟ್ ಗಾಗಿ ಬಳಸಲಾಗುತ್ತಿದೆ. ಈ ಜಮೀನಿನಲ್ಲಿ ರೈತರು ಫಸಲು ಬೆಳೆದಿದ್ದರಿಂದ ಪ್ರತಿ ಗುಂಟೆಗೆ ರೂ. 3,000 ನೀಡುವಂತೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದರು.

Home add -Advt

ಸಚಿವರ ಸೂಚನೆಯಂತೆ ರೈತರಿಗೆ ಪ್ರತಿ ಗುಂಟೆಗೆ ರೂ. 3000 ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿಗಳು ತಿಳಿಸಿದ್ದಾರೆ.


ಇದಕ್ಕೂ ಮೊದಲು ರೈತರು ಜಮೀನಿನ ಬಾಡಿಗೆ ಹೆಚ್ಚಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದರು. ಸಚಿವರು ರೈತರ ಮನವಿಗೆ ಸ್ಪಂದಿಸಿದಂತಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button