Kannada NewsKarnataka NewsLatest

*BREAKING: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ*

ಪ್ರಗತಿವಾಹಿನಿ ಸುದ್ದಿ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾರೆಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಆರ್ ಪಿ ಎಫ್ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ. 2013ರ ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಂಧನವಾಗಿದೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು ಸತತ ಆರು ಗಂಟೆಗಳ ಕಾಲ ರೈಲ್ವೆ ತಡೆ ನಡೆಸಿ ರೈತರಿಂದ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇದೇ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿಯಲ್ಲಿ 6 ಗಂಟೆಗಳ ಕಾಲ ರೈಲು ತಡೆ ನಡೆಸಿದ್ದ ಪ್ರಕರಣದಲ್ಲಿ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಆರ್‌ಪಿಎಫ್ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ತರಸ್ಕರಿಸಿದ್ದಾರೆ. 14 ದಿನಗಳ ಕಾಲ ನ್ಯಾಅಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button