Belagavi NewsBelgaum NewsKannada NewsKarnataka News

*ವಿದ್ಯುತ್ ಕಡಿತಕ್ಕೆ ರೈತರ ಆಕ್ರೋಶ:  ಹೆಸ್ಕಾಂ ಕಚೇರಿಗೆ ಬೀಗ*

ಪ್ರಗತಿವಾಹಿನಿ ಸುದ್ದಿ: ನಿರಂತರ ವಿದ್ಯುತ್ ಕಡಿತದಿಂದ ಕಂಗಾಲಾದ ರೈತರು ಅಥಣಿ ಹೆಸ್ಕಾಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

24 ಗಂಟೆಗಳ ಅವಧಿಯಲ್ಲಿ ಕೇವಲ ಮೂರು ಗಂಟೆ ವಿದ್ಯುತ್ ಪೂರೈಕೆಯಾಗುತ್ತಿದೆ ಎಂದು ಆರೋಪಿಸಿರುವ ರೈತರು, ಗ್ರಾಮೀಣ ಪ್ರದೇಶಗಳಲ್ಲಿ ಜನರು ಕತ್ತಲಿನಲ್ಲಿ ದಿನ ಕಳೆಯುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾತ್ರಿ ವೇಳೆ ವಿದ್ಯುತ್ ಸಂಪರ್ಕ ಕಡಿತವಾಗುತ್ತಿರುವುದರಿಂದ ಮನೆಗಳಲ್ಲಿ ಮೊಬೈಲ್ ಹಾಗೂ ಕ್ಯಾಂಡಲ್ ಬೆಳಕಿನಲ್ಲಿ ಊಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಸಮಸ್ಯೆಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿದ್ದು, ನೀರಾವರಿ ಪಂಪ್‌ಗಳು ಕಾರ್ಯನಿರ್ವಹಿಸದೆ ಜಮೀನುಗಳಿಗೆ ನೀರು ಹಾಯಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಬೆಳೆಗಳು ಒಣಗುವ ಆತಂಕ ಎದುರಾಗಿದೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ತಕ್ಷಣ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದ ರೈತರು, ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಿದರು. ಇದೇ ವೇಳೆ ಹೆಸ್ಕಾಂ ಕಚೇರಿಗೆ ಬೀಗ ಹಾಕಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button