ಪ್ರಗತವಾಹಿನಿ ಸುದ್ದಿ, ಬೆಳಗಾವಿ : ನೆರೆ ಮತ್ತು ಬರ ಪರಿಹಾರ ಸಮರ್ಪಕವಾಗಿ ನೀಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದರ ಜೊತೆಗೆ ವಸೂಲಾತಿ ಪ್ರಕ್ರಿಯೆ ನಿಲ್ಲಿಸಬೇಕು ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ ನಡೆಸಲಾಯಿತು.
ಇಂದು ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಡಾ. ಸ್ವಾಮಿ ನಾಥನ್ ಆಯೋಗದ ವರದಿ ಜಾರಿಗೆ ಬರಬೇಕು, ಸೋಯಾಬಿನ್ ಮತ್ತು ಕಡ ಧಾನ್ಯಗಳ ಖರೀದಿ ಕೇಂದ್ರ ತಾಲೂಕು ವ್ಯಾಪ್ತಿಯಲ್ಲಿ ಸ್ಥಾಪಿಸಬೇಕು. ಕೃಷಿ ಮಾರುಕಟ್ಟೆ ಜೀವಂತ ಗೊಳಿಸುವುದರ ಜೊತೆಗೆ ಖಾಸಗಿ ಮಾರುಕಟ್ಟೆ ನಿಯಂತ್ರಣ ಹಾಗೂ ಖಾಸಗಿ ಮಾರುಕಟ್ಟೆಯಲ್ಲಿ ಆಗುತ್ತಿರುವ ಮೋಸಗಳಿಗೆ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ನಿರಂತರ ವಿದ್ಯುತ್ ಒದಗಿಸುವುದು ಹಾಗೂ ಅಕ್ರಮ ಸಕ್ರಮ ಯೋಜನೆಗಳನ್ನು ಮುಂದುವರಿಸಬೇಕು ಎಂದು ಪ್ರತಿಭಟನೆಯಲ್ಲಿ ಆಗ್ರಹಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ