Kannada NewsKarnataka NewsLatest

*ಸಿಡಿಲಬ್ಬರಕ್ಕೆ ಮಹಿಳೆ ಹಾಗೂ 20ಕ್ಕೂ ಹೆಚ್ಚು ಕುರಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

Home add -Advt

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಳಿ, ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು, ಇನ್ನು ಕೆಲವೆಡೆ ಸಿಡಿಲು ಬಡಿದ ಹೊಡೆತಕ್ಕೆ ಅನಾಹುತಗಳು ಸಂಭವಿಸಿವೆ. ಹೊಸಕೋಟೆಯ ಗಣಗಲು ಗ್ರಾಮದಲ್ಲಿ ಮಹಿಳೆ ಹಾಗೂ 20ಕ್ಕೂ ಹೆಚ್ಚು ಕುರಿಗಳು ಸಿಡುಇಲು ಬಡಿದು ಮೃತಪಟ್ಟಿರುವ ಘಟನೆ ನಡೆದಿದೆ.

ಗುಡುಗು, ಸಿಡಿಲು, ಬಿರುಗಾಳಿ ಮಳೆಯಿಂದ ರಕ್ಷಿಸಿಕೊಳ್ಳಲು ಮಹಿಳೆ, ಕುರಿಗಳ ಸಮೇತ ಮರದ ಕೆಳಗೆ ನಿಂತಿದ್ದರು. ಈ ವೇಳೆ ಮರಕ್ಕೆ ಸಿಡಿಲು ಬಡಿದಿದ್ದು, ಸ್ಥಳದಲ್ಲೇ ಮಹಿಳೆ ಹಾಗೂ ಕುರಿಗಳು ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button