ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ದೆಹಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಕೆಂಪುಕೋಟೆ ಮೇಲೆ ಧ್ವಜವೇರಿಸಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಪ್ರತಿಭಟನಾಕಾರರು ಕೆಂಪುಕೋಟೆಗೆ ನುಗ್ಗಿ ಕೆಂಪುಕೋಟೆಯ ಮೂರು ಕಡೆಗಳಲ್ಲಿ ಧ್ವಜಾರೋಹಣ ಮಾಡಿದ್ದು, ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿ ಸ್ಥಳದಿಂದ ಎಲ್ಲರನ್ನೂ ಚದುರಿಸಿದ್ದಾರೆ. ಈ ಘಟನೆ ಬೆನ್ನಲ್ಲೇ ಅಮಿತ್ ಶಾ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ.
ರೈತರ ಪ್ರತಿಭಟನೆ ಹಾಗೂ ಇಂದು ನಡೆದ ಘಟನೆಗಳ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ ಪ್ರತಿಭಟನೆ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳದಂತೆ ಕಟ್ಟೆಚ್ಚರ ವಹಿಸುವಂತೆ ಪ್ಯಾರಾಮಿಲಿಟರಿ ದಳಗಳಿಗೆ ಸೂಚನೆ ನೀಡಿದ್ದಾರೆ.
ಕೆಂಪುಕೋಟೆ ಮೇಲೆ ಹಾರಿದ್ದು ಯಾವ ಧ್ವಜ?
ಕೆಂಪುಕೋಟೆಗೆ ನುಗ್ಗಿ ಧ್ವಜಾರೋಹಣ ಮಾಡಿದ ಪ್ರತಿಭಟನೆಕಾರರು (Updated)
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ