ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಂಯುಕ್ತ ಕಿಸಾನ್ ಮೋರ್ಚ್ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ದೇಶಾದ್ಯಂತ ರೈತ ಸಂಘಟನೆಗಳು ಕೇಂದ್ರ ಕೃಷಿ ಕಾಯ್ದೆ ವಿರುದ್ಧ ಬೀದಿಗಿಳಿದು ಹೋರಾಟ ನದೆಸುತ್ತಿದ್ದು, ಈ ವೇಳೆ ದುರಂತವೊಂದು ಸಂಭವಿಸಿದೆ.
ದೆಹಲಿ-ಹರಿಯಾಣ ಬಳಿ ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ವೇಳೆ ರೈತನಾಯಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಿಭಟನೆ ವೇಳೆ ಹೃದಯಾಘಾತದಿಂದ ರೈತ ಸಾವನ್ನಪ್ಪಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ.
ಇನ್ನೊಂದೆಡೆ ದೆಹಲಿಯ ಘಾಜಿಪುರ್ ಗಡಿ ಪ್ರದೇಶದಲ್ಲಿ ರೈತರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದು, ಉತ್ತರ ಪ್ರದೇಶ ಮತ್ತು ದೆಹಲಿ ನಡುವೆ ಸಂಚಾರ ಮಾರ್ಗ್ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ಕ್ ಜಾಮ್ ಉಂಟಾಗಿದ್ದು, ಕಿಲೋಮೀಟರ್ ಗಟ್ಟಲೆ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದು, ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಳಗಾವಿಯಲ್ಲಿ ರೈತರ ಅರೆಬೆತ್ತಲೆ ಪ್ರತಿಭಟನೆ; ಧರಣಿ ವೇಳೆ ಎಲ್ಲಮ್ಮ ದೇವಿ ಮೈಮೇಲೆ ಬಂತೆಂದು ಮಹಿಳೆ ಹೈಡ್ರಾಮಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ