Kannada NewsKarnataka NewsLatest

*ಬಿಗ್ ಬಾಸ್ ಸ್ಪರ್ಧಿಗೆ ಸನ್ಮಾನ; ಪಿಎಸ್ ಐ ದಿಢೀರ್ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಖ್ಯಾತಿಯ ವರ್ತೂರು ಸಂತೋಷ್ ಬಿಗ್ ಬಾಸ್ ವಿನ್ನರ್ ಗಿಂತಲೂ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಹಲವೆಡೆಗಳಲ್ಲಿ ವರ್ತೂರು ಸಂತೋಷ್ ಗೆ ಅಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳು ಸನ್ಮಾನ ಮಾಡುತ್ತಿವೆ. ಈ ನಡುವೆ ಕೆಲ ಪೊಲೀಸ್ ಸಿಬ್ಬಂದಿಗಳು ಕೂಡ ಸನ್ಮಾನ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ.

ಪಿಎಸ್ ಐ ತಿಮ್ಮರಾಯಪ್ಪ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಪೊಲೀಸ್ ಸಮವಸ್ತ್ರದಲ್ಲಿಯೇ ಸನ್ಮಾನ ಮಾಡುವ ಮೂಲಕ ಇಲಾಖೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Home add -Advt

ಪಿಎಸ್ ಐ ತಿಮ್ಮರಾಯಪ್ಪ ವರ್ತೂರು ಸಂತೋಷ್ ಗೆ ಪೇಟ, ಶಾಲು ತೊಡಿಸಿ ಸನ್ಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಇದೀಗ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ತಿಮ್ಮರಾಯಪ್ಪ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.


Related Articles

Back to top button