ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ 70ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ದೇಶಾದ್ಯಂತ ಹೆದ್ದಾರಿ ತಡೆ ನಿಟ್ಟಿನಲ್ಲಿ ಚಕ್ಕಾ ಜಾಮ್ ಹೋರಾಟಕ್ಕೆ ಕರೆ ನೀಡಲಾಗಿದೆ.
ದೆಹಲಿಯಲ್ಲಿ ಟ್ರ್ಯಾಕ್ಟರ್ ಜಾಥಾಗೆ ಕರೆ ನೀಡಿದ್ದ ಸಂಯುಕ್ತ ಕಿಸಾನ್ ಮೋರ್ಚಾ 40 ರೈತ ಸಂಘಟನೆಗಳ ಒಕ್ಕೂಟ ಹೆದ್ದಾರಿ ತಡೆಗೆ ಕರೆ ನೀಡಿದೆ. ಇದಕ್ಕೆ ರಾಜ್ಯ ರೈತ ಸಂಘಟನೆಗಳೂ ಬೆಂಬಲ ನೀಡಿದ್ದು, ಇಂದು ಮಧ್ಯಾಹ್ನ ರಾಜ್ಯದ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಮಧ್ಯಾಹ್ನ 12ಗಂಟೆಯಿಂದ ಮಧ್ಯಾಹ್ನ 3ಗಂಟೆಯವರೆಗೆ ರೈತರು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಯಾವೆಲ್ಲ ರಸ್ತೆಗಳು ಬಂದ್?:
ಶಿವಮೊಗ್ಗ-ಚಿತ್ರದುರ್ಗ ರಾಜ್ಯ ಹೆದ್ದಾರಿ, ವಿಜಯಪುರ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ, ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ ಬಂದ್ ಆಗಲಿದೆ.
ಬೆಂಗಳೂರು-ಮೈಸೂರು, ಬಿಡದಿ-ಮಂಡ್ಯ ರಾಜ್ಯ ಹೆದ್ದಾರಿ
ರಾಯಚೂರು ಅಸ್ಕಿಹಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ
ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು-ಗೋವಾ ರಾಷ್ಟ್ರೀಯ ಹೆದ್ದಾರಿ
ಪುಣಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ
ಬೆಂಗಳೂರು -ಮಾಗಡಿ ರಸ್ತೆ ರಾಜ್ಯ ಹೆದ್ದಾರಿ
ಬೆಂಗಳೂರು-ಚಾಮರಾಜನಗರ ಹೆದ್ದಾರಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಹೆದ್ದಾರಿ ಬಂದ್ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ