Latest

ಫೆ.6ರಂದು ದೇಶಾದ್ಯಂತ ಹೆದ್ದಾರಿ ಬಂದ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಈ ನಡುವೆ ಫೆಬ್ರವರಿ 6ರಂದು ದೇಶಾದ್ಯಂತ ಹೆದ್ದಾರಿ ಬಂದ್ ಮಾಡಿ ಅನ್ನದಾತರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಈ ಕುರಿತು ಸ್ವರಾಜ್ ಇಂಡಿಯಾ ಸಂಘಟನೆಯ ಯೋಗೇಂದ್ರ ಯಾದವ್ ಮತ್ತು ಇತರ ರೈತ ನಾಯಕರು ನಿರ್ಧರಿಸಿದ್ದು, ಫೆ.6ರಂದು ಮಧ್ಯಾಹ್ನ 12ಗಂಟೆಯಿಂದ 3 ಗಂಟೆಯವರೆಗೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಬಂದ್ ನಡೆಸಲು ಕರೆ ನೀಡಿದ್ದಾರೆ.

ಈ ನಡುವೆ ದೆಹಲಿ ಗಾಜಿಪುರ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ರೈತರನ್ನು ತಡೆಯಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ, ರಸ್ತೆಗೆ ಕಬ್ಬಿಣದ ಮೊಳೆಗಳನ್ನು ಅಳವಡಿಸಿ ದೆಹಲಿಯತ್ತ ರೈತರು ಹೋಗದಂತೆ ಕ್ರಮ ಕೈಗೊಂಡಿದ್ದಾರೆ.

Related Articles

Back to top button