Latest

ಸೆ.25ರಂದು ರಸ್ತೆ ತಡೆ; 28ರಂದು ಕರ್ನಾಟಕ ಬಂದ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೈತರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮಂಡನೆ ಮಾಡಿರುವ ಎಪಿಎಂಸಿ ತಿದ್ದುಪಡಿ ಮಸೂದೆ ಬೆನ್ನಲ್ಲೇ ಸೆ.25ರಂದು ಜೈಲ್ ಭರೋ ಚಳುವಳಿ ನಡೆಸಲು ಹಾಗೂ ಸೆ.28ರಂದು ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿವೆ.

ಮಸೂದೆ ಮಂಡನೆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ರೈತರು ಭುಗಿಲೆದ್ದಿದ್ದು, ಸೆ.25ರಂದು ಸರ್ಕಾರದ ವಿರುದ್ಧ ಜೈಲ್ ಭರೋ ಚಳುವಳಿ ನಡೆಯಲಿದೆ. ರಾಜ್ಯಾದ್ಯಂತ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುವುದು ಹಾಗೂ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡ ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಇನ್ನು ರೈತ ವಿರೋಧಿ ಮಸೂದೆ ಖಂಡಿಸಿ ಸೆ.28ರಂದು ಕರ್ನಾಟಕ ಬಂದ್ ನಡೆಯಲಿದ್ದು, ರಾಜ್ಯದ ಎಲ್ಲಾ ಭಾಗದ ರೈತರು ಈ ಬಂದ್ ನಲ್ಲಿ ಭಾಗಿಯಾಗಬೇಕು ಎಂದು ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕರೆ ನೀಡಿದ್ದಾರೆ.

ಈ ನಡುವೆ ಕರ್ನಾಟಕ ಬಂದ್ ಗೆ ಓಲಾ-ಊಬರ್ ಕ್ಯಾಬ್ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡಿದ್ದು, ಸೆ.28ರಂದು ಕ್ಯಾಬ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ. ರಾಜ್ಯ ನೆಲ,ಜಲ, ಭಾಷೆ ಹಾಗೂ ಪ್ರಮುಖವಾಗಿ ರೈತರ ವಿಚಾರ ಬಂದಾಗ ನಮ್ಮ ಒಕ್ಕೋರಲ ಬೆಂಬಲವಿದೆ ಇದರಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲ ಎಂದು ಸಂಘದ ಅಧ್ಯಕ್ಷ ತನ್ವೀರ್ ತಿಳಿಸಿದ್ದಾರೆ.

ಕರ್ನಾಟಕ ಬಂದ್ ಗೆ ಬೀದಿಬದಿ ವ್ಯಾಪಾರಸ್ಥರು ಸಂಪೂರ್ಣ ಬೆಂಬಲ ನೀಡಿದ್ದು, ಯಾವುದೇ ವ್ಯಾಪರ ವಹಿವಾಟು ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಆದರೆ ಹೋಟೆಲ್ ಗಳನ್ನು ಮುಚ್ಚುವುದಿಲ್ಲ. ಈಗಾಗಲೇ ಕೊರೊನಾ ಲಾಕ್ ಡೌನ್ ನಿಂದಾಗಿ ಹೋಟೆಲ್ ಉದ್ಯಮ ಸಾಕಷ್ಟು ತೊಂದರೆ ಅನುಭವಿಸಿದ್ದು, ಮತ್ತೆ ಬಂದ್ ಮಾಡಲು ಸಾಧ್ಯವಿಲ್ಲ ಎಂದು ಹೋಟೇಲ್ ಮಾಲೀಕರ ಸಂಘ ತಿಳಿಸಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button