ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಭುಗಿಲೆದ್ದಿದ್ದು, ದೆಹಲಿಯ ಗಡಿಯಲ್ಲಿ ಪ್ರತಿಭಟನಾ ನಿರತರ ಮೇಲೆ ಲಾಠಿಚಾರ್ಜ್, ಜಲಫಿರಂಗಿ ಪ್ರಯೋಗ ಮಾಡಲಾಗುತ್ತಿದೆ.
ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿ ಸಿಂಘು ಗಡಿ, ಗಾಜಿಪುರ ಗಡಿಯಲ್ಲಿ ಟ್ರ್ಯಾಕ್ಟರ್ ಚಳುವಳಿ ನಡೆಸುತ್ತಿದ್ದು, ಲಕ್ಷಾಂತರ ರೈತರು ದೆಹಲಿಗೆ ಲಗ್ಗೆ ಇಡಲು ಮುಂದಾಗಿದ್ದಾರೆ. ದೆಹಲಿ ಸಂಪರ್ಕ ಕಲ್ಪಿಸುವ ನಾಲ್ಕು ಹೆದ್ದಾರಿಗಳಲ್ಲಿ ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಸಾಗರೋಪಾದಿಯಲ್ಲಿ ಆಗಮಿಸಿದ ರೈತರು ಜೆಸಿಬಿ, ಟ್ರಕ್, ಕ್ರೇನ್, ಟ್ರ್ಯಾಕ್ಟರ್, ಕುದುರೆ ಮೂಲಕ ದೆಹಲಿಗೆ ಲಗ್ಗೆಯಿಡಲು ಮುಂದಾಗಿದ್ದು, ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸರು ರೈತರನ್ನು ತಡೆಯಲು ಯತ್ನಿಸಿದ್ದಾರೆ.
ಆದರೆ ರೈತರು ಬ್ಯಾರಿಕೇಡ್ ಗಳನ್ನು ಕಿತ್ತೆಸೆದು ಮುನ್ನುಗ್ಗಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಲಾಠಿಚಾರ್ಜ್ ಹಾಗೂ ಜಲಫಿರಂಗಿ ಪ್ರಯೋಗ ಮಾಡಿದ್ದಲ್ಲದೇ ಪ್ರತಿಭಟನೆಕಾರರನ್ನು ಥಳಿಸಿದ್ದಾರೆ. ಇದರಿಂದ ರೈತರ ಆಕ್ರೋಶ ಇನ್ನಷ್ಟು ಭುಗಿಲೆದ್ದಿದ್ದು, ಪೊಲೀಸರ ಭದ್ರ ಕೊಟೆಯನ್ನೇ ಭೇದಿಸಲು ರೈತರು ಮುಂದಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ