Latest

ರೈತರ ಹೆಸರಲ್ಲಿ ಗೂಂಡಾಗಿರಿ; ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಹಾಗೂ ರೈತರ ನಡುವೆ ಸಂಘರ್ಷ ನಡೆದಿದೆ.

ಟ್ರ್ಯಾಕ್ಟರ್ ರ್ಯಾಲಿ ಮೂಲಕ ದೆಹಲಿಗೆ ನುಗ್ಗಲು ಮುಂದಾದ ರೈತರ ಮೇಲೆ ಪೊಲೀಸರು ಲಾಠಿ ಚಾರ್ಜ್, ಜಲಫಿರಂಗಿ ಪ್ರಯೋಗ ಮಾಡುತ್ತಿದ್ದಂತೆಯೇ ರೊಚ್ಚಿಗೆದ್ದ ರೈತರು ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾರೆ. ಹೋರಾಟ ನಿರತ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಹಲವೆಡೆ ರಾಡ್ ನಿಂದಲೂ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಹಲವು ರೈತರು ಹಾಗೂ ಪೊಲೀಸರು ಗಾಯಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂದಿದೆ

ಸಿಂಘಿ ಗಡಿ, ಗಾಜಿಪುರಗಡಿ ಅಕ್ಷರಶ: ರಣರಂಗವಾಗಿದ್ದು, ಸಿಕ್ಕಸಿಕ್ಕ ವಸ್ತುಗಳಿಂದ ರೈತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಇನ್ನೊಂದೆಡೆ ಟ್ರ್ಯಾಕ್ಟರ್, ಜೆಸಿಬಿ, ಕ್ರೇನ್ ಗಳ ಮೂಲಕ ಪೊಲೀಸರು ಹಾಕಿರುವ ಬ್ಯಾರಿಕೆಡ್ ಗಳನ್ನು ತಳ್ಳಿ ಮುನ್ನುಗ್ಗುತ್ತಿದ್ದಾರೆ. ಒಟ್ಟಾರೆ ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆ ಹಿಂಸಾರೂಪ ತಳೆದಿದ್ದು, ರೈತರ ಹೆಸರಲ್ಲಿ ಗೂಂಡಾಗಿರಿ ನಡೆದಿದೆ ಎನ್ನಲಾಗಿದೆ.

ಪರೇಡ್ ಗೆ ಮುಂದಾದ ರೈತರ ಮೇಲೆ ಲಾಠಿಚಾರ್ಜ್; ಹಿಗ್ಗಾಮುಗ್ಗ ಥಳಿಸಿದ ಪೊಲೀಸರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button