ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತರು ಯತ್ನಿಸಿದ್ದಾರೆ.
ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಬಳಿಕ ಅಲ್ಲಿಂದ ಪ್ರತಿಭಟನಾಮೆರವಣಿಗೆಯಲ್ಲಿ ಸಾಗಿದ ರೈತರು ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
ಸುವರ್ಣ ವಿಧಾನಸೌಧದತ್ತ ಧಾವಿಸಿ ಬರುತ್ತಿದ್ದ ರೈತರನ್ನು ಹತ್ತರಗಿ ಟೋಲ್ ಗೇಟ್ ಬಳಿ ಪೊಲೀಸರು ತಡೆದಿದ್ದಾರೆ. ಪ್ರತಿಭಟನೆ ಹತ್ತಿಕ್ಕಲು ಮುಂದಾದ ಪೊಲೀಸರ ವಿರುದ್ಧವೇ ತಿರುಗಿಬಿದ್ದ ರೈತ ಹೋರಾಟಗಾರರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ ಹತ್ತರಗಿ ಟೋಲ್ ಗೇಟ್ ಬಳಿಯೇ ಧರಣಿ ಕುಳಿತ ರೈತರು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಧರಣಿ ನಿರತರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಧರಣಿ ನಿರತರ ನಡುವೆ ವಾಗ್ವಾದ ನಡೆದು, ನೂಕಾಟ, ತಳ್ಳಾಟ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವಾರಣ ನಿರ್ಮಾಣವಾಗಿದೆ. ಈ ವೇಳೆ ಹಲವು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುರುಘಾಶ್ರೀಗಳಿಗೆ ಮತ್ತೆ ಜೈಲು ವಾಸವೇ ಗತಿ
https://pragati.taskdun.com/latest/murughashreejudicial-custodyextained-2/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ