Latest

ನಟ ದೀಪ್ ಸಿಧುನನ್ನು ಬಂಧಿಸಿದ ದೆಹಲಿ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ, ಕೆಂಪುಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಲು ಪ್ರೇರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬಿ ನಟ ದೀಪ್ ಸಿಧುನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 14 ದಿನಗಳಿಂದ ತಲೆಮರೆಸಿಕೊಂಡಿದ್ದ ದೀಪ್ ಸಿಧುನನ್ನು ಇದೀಗ ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Home add -Advt

ಜ.26ರಂದು ದೆಹಲಿಯಲ್ಲಿ ರೈತರು ನಡೆಸಿದ್ದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಲು ನಟ ದೀಪ್ ಸಿಧು ಪ್ರೇರಣೆ ನೀಡಿದ್ದರು ಎನ್ನಲಾಗಿದೆ. ಅಲ್ಲದೇ ಕೆಂಪುಕೋಟೆಯ ಮೇಲೆ ಧಾರ್ಮಿಕ ಧ್ವಜವನ್ನು ಹಾರಿಸುವ ಮೂಲಕ ಇನ್ನಷ್ಟು ವಿವಾದಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ದೀಪ್ ಸಿಧು ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆಯೇ ದೀಪ್ ಸಿಧು ತಲೆಮರೆಸಿಕೊಂಡಿದ್ದರು. ಅಂತಿಮವಾಗಿ ದೀಪ್ ಸಿಧುನನ್ನು ಇದೀಗ ದೆಹಲಿ ಪೊಲೀಸರು ಬಮ್ಧಿಸಿದ್ದಾರೆ.

 

Related Articles

Back to top button