Kannada NewsKarnataka NewsLatest

*ರೈತರಿಗೆ ಶೂನ್ಯ ಬಡ್ದಿದರದಲ್ಲಿ ಸಾಲ; ಸಾಲದ ಮಿತಿ ಏರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ಶೂನ್ಯ ಬದ್ಡಿದರದಲ್ಲಿ ಸಾಲದ ಮಿತಿಯನ್ನು ಏರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

2023-24ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಸಿಎಂ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಲಾಗುವುದು. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನು 10 ಲಕ್ಷದಿಂದ 15 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದರು.

ಗುಡ್ಡಗಾಡು ಪ್ರದೇಶದ ರೈತರಿಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದರು.

ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ ಮಾಡಲಾಗುವುದು. ಚಿಕ್ಕಮಗಳೂರು ಕಾಫಿ ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ, ರಾಮನಗರ, ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ಕುರಿ. ಮೇಕೆ ಮೃತಪಟ್ಟರೆ 5 ಸಾವಿರ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.

Home add -Advt


Related Articles

Back to top button