
ಪ್ರಗತಿವಾಹಿನಿ ಸುದ್ದಿ: ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗೊಂದಿ ಚಟ್ನಹಳ್ಳಿಯಲ್ಲಿ ನಡೆದಿದೆ.
ಗೊಂದಿ ಚಟ್ನಹಳ್ಳಿ ರೈತ ಮಹೇಶ್ (40) ಮೃತ ದುರ್ದೈವಿ. ಸಾಲಬಾಧೆಯಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ತುಂಗಾನದಿ ಪಕ್ಕದ ಮರದಲ್ಲಿ ನೇಣು ಬಿಗಿದುಕೊಂಡ ರೀತಿಯಲ್ಲಿ ಶವ ಪತ್ತೆಯಾಗಿದೆ.
ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬ್ಯಾಂಕ್ ಸೇರಿದಂತೆ ಖಾಸಗಿಯಾಗಿ 15 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
 
					 
				 
					 
					 
					 
					
 
					 
					 
					


