ಗೃಹ ಬಂಧನದಿಂದ ಬಿಡುಗಡೆಯಾದ ಜಮ್ಮು-ಕಾಶ್ಮೀರ ಮಾಜಿ ಸಿಎಂ

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ಆರ್ಟಿಕಲ್ 370ರ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಗೃಹ ಬಂಧನದಲ್ಲಿ ಇಡಲಾಗಿದ್ದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಅವರನ್ನು ಏಳು ತಿಂಗಳ ಬಳಿಕ ಇದೀಗ ಬಿಡುಗಡೆ ಮಾಡಲಾಗಿದೆ.

ಕಾಶ್ಮೀರಕ್ಕೆ ನೀಡಿದ್ದ ಸವಲತ್ತನ್ನು ಹಿಂಪಡೆದ ಬೆನ್ನಲ್ಲೇ ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಓಮರ್​ ಅಬ್ದುಲ್ಲಾ, ಮೆಹಬೂಬಾ ಮುಫ್ತಿ, ಫಾರೂಕ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕೀಯ ಮುಖಂಡರಿಗೆ ಗೃಹಬಂಧನ ವಿಧಿಸಲಾಗಿತ್ತು. ಗೃಹ ಬಂಧನ ಮುಗಿದ ಬೆನ್ನಲ್ಲೇ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ವಶಕ್ಕೆ ಪಡೆಯಲಾಗಿತ್ತು. ಇದೀಗ ಫಾರೂಕ್​ ಅಬ್ದುಲ್ಲಾ ಅವರನ್ನು ಬಿಡುಗಡೆಗೊಳಿಸಲಾಗಿದೆ.

ರಾಜಕೀಯ ನಾಯಕರನ್ನು ಬಿಡುಗಡೆ ಮಾಡಿದರೆ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗಲಿದೆ ಮತ್ತು ಈ ನಾಯಕರು ಜನರನ್ನು ಧಂಗೆ ಏಳಿಸುವ ಸಾಧ್ಯತೆ ಇದೆ ಎಂಬ ಕಾರಣ ನೀಡಿ ಬಂಧಿಸಲಾಗಿತ್ತು.

ಓಮರ್​ ಅಬ್ದುಲ್ಲಾ ತಂಗಿ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂ ಕೋರ್ಟ್​ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಇನ್ನು ಕೆಲವೇ ದಿನಗಳಲ್ಲಿ ಮೆಹಬೂಬಾ ಮುಫ್ತಿ ಮತ್ತು ಓಮರ್​ ಅಬ್ದುಲ್ಲಾ ಕೂಡ ಬಿಡುಗಡೆಯಾಗುವ ಸಾಧ್ಯತೆಯಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button