Kannada NewsKarnataka NewsNational

*ಭೀಕರ ಅಪಘಾತ: 9 ಸಾವು* 

ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿಯಾದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು 23 ಮಂದಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ಛತ್ತೀಸಗಡದ ಬೆಮೆತಾರ ಎಂಬಲ್ಲಿ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಕ್ಕೆ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಪಘಾತಕ್ಕೆ ವೇಗವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button