
ಪ್ರಗತಿವಾಹಿನಿ ಸುದ್ದಿ: ಟ್ರಕ್ ಮತ್ತು ಟೋನ್ಸುರ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಸಿಧಿಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದೆ.
ಗಾಯಾಳುಗಳ ಪೈಕಿ 9 ಜನರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಗಾಯಾಳುಗಳನ್ನು ಸಮೀಪದಲ್ಲಿರುವ ಸಂಜಯ್ ಗಾಂಧಿ ಆಸ್ಪತ್ರೆ ಮತ್ತು ರೇವಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ