National

*ಎರಡು ಟ್ರಕ್ ಗಳ ಮಧ್ಯೆ ಭೀಕರ ಅಪಘಾತ: 13 ಮಂದಿ ಸಾವು*

ಪ್ರಗತಿವಾಹಿನಿ ಸುದ್ದಿ : ಎರಡು ಟ್ರಕ್ ಗಳ ಮದ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ  13 ಮಂದಿ ಸಾವನ್ನಪ್ಪಿರುವ  ಘಟನೆ ಛತ್ತೀಸ್ ಘಡ ರಾಜ್ಯದ ರಾಯಪುರ -ಬಲೋಡಾಬಜಾ‌ರ್ ರಸ್ತೆಯಲ್ಲಿ ಇಂದು ಬೆಳ್ಳಂ ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ 11 ಮಂದಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೌತಿಯಾ ಚಟ್ಟಿ ಕಾರ್ಯಕ್ರಮ ಮುಗಿಸಿ ವಾಪಸ್ ಬರುವ ವೇಳೆ ಅವಘಡ ನಡೆದಿದೆ. 

ಅತಿಯಾದ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓವರ್ ಲೋಡಿಂಗ್ ನಿಂದ ಅಪಘಾತ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button