
ಪ್ರಗತಿವಾಹಿನಿ ಸುದ್ದಿ: ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಮಹಾರಾಷ್ಟ್ರ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದ್ದು, ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಡಿವೈಎಸ್‌ಪಿ ವೈಷ್ಣವಿ ಅವರ ತಾಯಿ ಕಮಲ ಹರಿಬಾಬು (69) ಹಾಗೂ ಕಾರು ಚಾಲಕ ರಾಕೇಶ್ (40) ಎಂದು ಗುರುತಿಸಲಾಗಿದೆ.
ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ. ಗಾಯಗೊಂಡ ಡಿವೈಎಸ್‌ಪಿ ವೈಷ್ಣವಿ ಅವರು ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದು, ಉಳಿದ ಮೂವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



