Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಭೀಕರ ಅಪಘಾತ: ಇಬ್ಬರು ಬೈಕ್ ಸವಾರರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಲಕಿ-ಮುರಗೋಡ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಇಬ್ಬರ ಜೀವ ನಡುರಸ್ತೆಯಲ್ಲಿ ಹಾರಿಹೋಗಿದೆ. ಮುರಗೋಡ ಗ್ರಾಮದ ಹೊರವಲಯದಲ್ಲಿ ಅಪರಿಚಿತ ವಾಹನವೊಂದು ಬೈಕ್ ಸವಾರರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ.

ಮೃತರನ್ನು ಸವದತ್ತಿ ತಾಲೂಕಿನ ಹುಲಿಕೇರಿ ತಾಂಡಾದ ನಿವಾಸಿಗಳಾದ ವಿಶಾಲ ಲಮಾಣಿ (20) ಮತ್ತು ಅಪ್ಪು ಲಮಾಣಿ (23) ಎಂದು ಗುರುತಿಸಲಾಗಿದೆ. ತೀವ್ರ ರಕ್ತಸ್ರಾವದಿಂದ ಯುವಕರು ಅಪಘಾತದವಾದ ಸ್ಥಳದಲ್ಲೆ ಪ್ರಾಣಬಿಟ್ಟಿದ್ದಾರೆ.

ರಸ್ತೆಯ ಮೇಲೆಯೇ ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದ ಯುವಕರ ಮೃತದೇಹವನ್ನು ಕಂಡು ಕುಟುಂಬಸ್ಥರು ಆಘಾತಗೊಂಡಿದ್ದು, ಗ್ರಾಮದಲ್ಲಿ ಶೋಕಸಂತಪ್ತ ವಾತಾವರಣ ನಿರ್ಮಾಣವಾಗಿದೆ. ಇಡೀ ಮನೆಯಲ್ಲಿ ಶೋಕ ಮನೆಮಾಡಿದೆ.

ಮೃತದೇಹವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button