Belagavi NewsBelgaum NewsKannada NewsKarnataka News

*ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಖ್ಯಾತ ವೈದ್ಯ ಸೇರಿ ಬೆಳಗಾವಿಯ ನಾಲ್ವರ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ದುಃಖದ ಘಟನೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಸಂಭವಿಸಿದೆ.

ಮೃತರನ್ನು ಸಂಕೇಶ್ವರದ ಖ್ಯಾತ ವೈದ್ಯರಾದ ಡಾ. ಸಚಿನ್ ಶಂಕರಗೌಡ ಪಾಟೀಲ್ ಅವರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದ ವಾಹನ ಸಂಪೂರ್ಣವಾಗಿ ಜಖಂಗೊಂಡಿದೆ.

ಡಾ. ಸಚಿನ್ ಶಂಕರಗೌಡ ಪಾಟೀಲ್  ಅವರು ಸೇರಿದಂತೆ ಸ್ಥಳದಲ್ಲೇ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಇತರ ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳಿದ್ದಾರೆಯೇ ಎಂಬುದೂ ಸ್ಪಷ್ಟವಾಗಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Home add -Advt

Related Articles

Back to top button