Belagavi NewsBelgaum NewsPolitics

*ಬಸ್ತವಾಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಆಪ್ತ ಬಸ್ತವಾಡ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ವಿಠಲ ಸಾಂಬ್ರೇಕ‌ರ್ ಸೇರಿದಂತೆ ನಾಲ್ವರ ಮೇಲೆ ಮಾರಣಾಂತಿಕವಾಗಿ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕುಂಡಡ್ಕೊಪ್ಪ ಗ್ರಾಮದಲ್ಲಿ ಇಂದು ನಡೆದಿದೆ.

ಗಾಯಾಳುಗಳನ್ನು ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಗೊಳಗಾದ ವಿಠಲ ಸಾಂಬ್ರೇಕರ್, ಗ್ರಾಮದಲ್ಲಿ ಸಮುದಾಯ ಭವನಕ್ಕಾಗಿ ಜಾಗ ನೀಡಿದ್ದರು. ಇದಕ್ಕೆ ಗ್ರಾಮದ ಜನರ ಸಹಮತದ ಮೇರೆಗೆ ಬದಲಿಯಾಗಿ ಸರ್ಕಾರಿ ಜಾಗ ಪಡೆದಿದ್ದರು. ಈ ವಿಚಾರಕ್ಕೆ ವಿರೋಧಿಸಿ ನಾಗಪ್ಪ ವಾಳಕೆ, ಗಜು ಡೋಂಗ್ರೆ, ಮೋನಪ್ಪ ಗುಜರಾನಟ್ಟಿ, ಶಂಕರ ಪಾಟೀಲ, ಪುಂಡಲೀಕ ಕುಡಚೇಕರ್, ಭೀಮಾ ದೇಮನ್ನವರ ಎಂಬುವವರು ವಿಠಲ ಮನೆಗೆ ಬಂದು ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಕಟ್ಟಡ ನಿರ್ಮಾಣ ಮಾಡುತ್ತಿರುವಾಗಲೇ ಇಟ್ಟಿಗೆಯಿಂದ ಮನಬಂದಂತೆ ಥಳಿಸಿ ಗಾಯಗೊಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ಮಾಡಿದ್ದು, ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಹಿರೇಬಾಗೆವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button