Kannada NewsKarnataka NewsLatest

*ಮೋಂಥಾ ಎಫೇಕ್ಟ್: ಕರಾವಳಿಯಲ್ಲಿ ಬಿರುಗಾಳಿ ಅಬ್ಬರ: ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಮೋಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೋಂಥಾ ಚಂಡಮಾರುತದ ಪರಿಣಾಮ ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.

Home add -Advt

ಕೋಲಾರ ಮತ್ತು ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದ್ದು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯ ಜೊತೆಗೆ ಬಾರಿ ಗಾಳಿ ಇರಲಿದೆ. ಗಾಳಿಯ ವೇಗ ಗಂಟೆಗೆ 45-55 ಕಿ.ಮೀ. ಇರಲಿದ್ದು 60 ಕಿ.ಮೀ. ತಲುಪುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇನ್ನು ಕರ್ನಾಟಕದ ಉತ್ತರ ಭಾಗದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ಬೀದರ್‌ನಲ್ಲಿ ದಟ್ಟ ಮೋಡ ಅಥವಾ ಸಣ್ಣ ಪ್ರಮಾಣದ ಮಳೆಯಾಗಲಿದೆ. ಕಲಬುರಗಿ, ಚಿತ್ರದುರ್ಗ, ಧಾರವಾಡ ಮತ್ತು ಬೆಳಗಾವಿಯಲ್ಲೂ ಮೋಡ ಕವಿದ ವಾತಾವರಣ ಇರಲಿದೆ.

Related Articles

Back to top button