Belagavi NewsBelgaum NewsCrimeKannada NewsKarnataka News

*ಪಂಚಾಯಿತಿ ಕಚೇರಿಯಲ್ಲೇ ತಂದೆ-ಮಗಳ ಬರ್ಬರ ಹತ್ಯೆ: ಬೆಚ್ಚಿಬಿದ್ದ  ಬೆಳಗಾವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ತಂದೆ ಮಗಳ ಭೀಕರ ಕೊಲೆಯಿಂದ ಜನ ಬೆಚ್ಚಿಬಿದ್ದರೆ.

ಆಸ್ತಿ ಕಲಹದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿಯ ಒಳಗಡೆಯೇ ನಿವೃತ್ತ ಯೋಧ ಹಾಗೂ ಅವರ ಪುತ್ರಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ನಡೆದಿದೆ. 

Home add -Advt

ದಾಳಿಯಲ್ಲಿ ಮತ್ತೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಅವರಾದಿ ಗ್ರಾಮದ ನಿವಾಸಿ, ಮಾಜಿ ಸೈನಿಕ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ ಕೊಲೆಯಾದ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ರುದ್ರಪ್ಪ ಕುಂದರಗಿ ಕುಟುಂಬದಲ್ಲಿ ಹಲವು ದಿನಗಳಿಂದ ಆಸ್ತಿ ಹಂಚಿಕೆಗೆ ಸಂಬಂಧಿಸಿದಂತೆ ತೀವ್ರ ವಿವಾದ ನಡೆಯುತ್ತಿತ್ತು. ಈ ವಿಚಾರವಾಗಿ ಮಾತುಕತೆ ಅಥವಾ ಕಾಗದಪತ್ರಗಳ ಪರಿಶೀಲನೆಗಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಬಂದಿದ್ದ ವೇಳೆ ಜಗಳ ವಿಕೋಪಕ್ಕೆ ಹೋಗಿದೆ. ಈ ಸಂದರ್ಭದಲ್ಲಿ ರುದ್ರಪ್ಪ ಅವರ ಇಬ್ಬರು ಸಹೋದರರು ಹಾಗೂ ಸಹೋದರನ ಪುತ್ರ ಏಕಾಏಕಿ ಮಾರಕಾಸ್ತ್ರಗಳಿಂದ ರುದ್ರಪ್ಪ ಮತ್ತು ಶಶಿಕಲಾ ಮೇಲೆ ದಾಳಿ ನಡೆಸಿದ್ದಾರೆ. 

ಗ್ರಾಮ ಪಂಚಾಯಿತಿ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಕಣ್ಣೆದುರೇ ಈ ಭೀಕರ ಕೃತ್ಯ ಎಸಗಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದ ತಂದೆ-ಮಗಳು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ ಪಿ, ಕೆ. ರಾಮರಾಜನ, ಕಿತ್ತೂರು ಠಾಣೆಯ ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್ಐ ಭರತ್ ಎಸ್. ಗಂಗಾಧರ ಹಂಪಣ್ಣವರ  ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ತನಿಖೆ ಚುರುಕುಗೊಳಿಸಿದ್ದಾರೆ. 

Related Articles

Back to top button