*ಪಂಚಾಯಿತಿ ಕಚೇರಿಯಲ್ಲೇ ತಂದೆ-ಮಗಳ ಬರ್ಬರ ಹತ್ಯೆ: ಬೆಚ್ಚಿಬಿದ್ದ  ಬೆಳಗಾವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ತಂದೆ ಮಗಳ ಭೀಕರ ಕೊಲೆಯಿಂದ ಜನ ಬೆಚ್ಚಿಬಿದ್ದರೆ. ಆಸ್ತಿ ಕಲಹದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿಯ ಒಳಗಡೆಯೇ ನಿವೃತ್ತ ಯೋಧ ಹಾಗೂ ಅವರ ಪುತ್ರಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ನಡೆದಿದೆ.  ದಾಳಿಯಲ್ಲಿ ಮತ್ತೋರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಅವರಾದಿ ಗ್ರಾಮದ ನಿವಾಸಿ, ಮಾಜಿ ಸೈನಿಕ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ ಕೊಲೆಯಾದ ದುರ್ದೈವಿಗಳು. ಗಂಭೀರವಾಗಿ … Continue reading *ಪಂಚಾಯಿತಿ ಕಚೇರಿಯಲ್ಲೇ ತಂದೆ-ಮಗಳ ಬರ್ಬರ ಹತ್ಯೆ: ಬೆಚ್ಚಿಬಿದ್ದ  ಬೆಳಗಾವಿ*