Kannada NewsKarnataka NewsNational
*ರೀಲ್ಸ್ ವೀಡಿಯೋ ಗೇಮ್ ಆಡುತ್ತಿದ್ದ ಮಗನನ್ನು ಹತ್ಯೆಗೈದ ತಂದೆ*

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬ ಓದದೇ ಮೊಬೈಲ್ ನೋಡುತ್ತಿದ್ದ ಮಗನನ್ನು ಕಂಡು ಕ್ರಿಕೆಟ್ ಬ್ಯಾಟ್ನಿಂದ ತಲೆಗೆ ಹೊಡೆದು ಹತ್ಯೆಗೈದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತೇಜಸ್ (14) ಮೃತಪಟ್ಟ ಬಾಲಕ. ಕಳೆದ 20 ದಿನಗಳಿಂದ ತೇಜಸ್ ಶಾಲೆಗೆ ಹೋಗದೇ ಪುಂಡರ ಜೊತೆ ತಿರುಗಾಡುತ್ತಿದ್ದ. ರಾತ್ರಿ ಮನೆಗೆ ಬಂದು ಮೊಬೈಲ್ನಲ್ಲಿ ರೀಲ್ಸ್ ವೀಡಿಯೋ ಗೇಮ್ ಆಡುತ್ತಿದ್ದ. ಅಲ್ಲದೇ ಹೊಸ ಮೊಬೈಲ್ ಕೊಡಿಸುವಂತೆ ತಂದೆಯೊಂದಿಗೆ ಜಗಳವಾಡಿದ್ದ. ಕುಡಿದು ಮನೆಗೆ ಬಂದಿದ್ದ ತಂದೆ ರವಿಕುಮಾರ್ ಮಗ ಮೊಬೈಲ್ ನೋಡುತ್ತಿರುವುದನ್ನು ಕಂಡು ಕೋಪಗೊಂಡು ಕ್ರಿಕೆಟ್ ಬ್ಯಾಟ್ನಿಂದ ಆತನ ತಲೆಗೆ ಹಲ್ಲೆ ನಡೆಸಿದ್ದಾನೆ. ಪರಿಣಾಮ ಗಂಭೀರ ಗಾಯಗೊಂಡ ತೇಜಸ್ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನೆಗೆ ಸಂಬಂಧಿಸಿ ಕುಮಾರಸ್ವಾಮಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಂದೆ ರವಿಕುಮಾರ್ನನ್ನು ವಶಕ್ಕೆ ಪಡೆದಿದ್ದಾರೆ.



