Latest

*ಊಟ ಕೇಳಿದ ಮಗನನ್ನೆ ಕೊಂದ ಪಾಪಿ ತಂದೆ*

ಪ್ರಗತಿವಾಹಿನಿ ಸುದ್ದಿ : ಕಳೆದ ನಾಲ್ಕೈದು ದಿನಗಳ ಹಿಂದೆ ತಂದೆ ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಗದಗ ನಲ್ಲಿ ನಡೆದಿತ್ತು, ಅದರ ಬೆನ್ನಲ್ಲೇ ಪಾಪಿ ತಂದೆಯೊಬ್ಬ ಸ್ವಂತ ಮಗನನ್ನು ಊಟ ಕೇಳಿದ ವಿಚಾರಕ್ಕೆ ಹಲ್ಲೆ ಮಾಡಿ ಸಾಯಿಸಿರುವ ಘಟನೆ ನಡೆದಿದೆ.

ಈ ಅಮಾನುಷ ಘಟನೆ ಚಿತ್ರದುರ್ಗ ತಾಲೂಕಿನ ಹಳೇ ರಂಗಾಪುರ ಗ್ರಾಮದಲ್ಲಿ ನಡೆದಿದೆ. ಊಟ ಬೇಕೆಂದು ಅಳುತ್ತಿದ್ದ ಮಗನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆಂದು ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾರೆ. ತಂದೆಯ ಹೊಡೆತಕ್ಕೆ ಮಗ ಸಾವನಪ್ಪಿದ್ದಾನೆ. ಮಂಜುನಾಥ (06) ಸಾವನ್ನಪ್ಪಿದ್ದಾನೆ. ಮಂಜುನಾಥ ಊಟ ಬೇಕೆಂದು ಅಳುತ್ತಿದ್ದ. ಅದಕ್ಕಾಗಿ ತಾಯಿ ಪಕ್ಕದ ಮನೆಗೆ ಊಟ ತರಲು ಹೋಗಿದ್ದಳು. ಹಿಂತಿರುಗಿ ಬರುವಷ್ಟರಲ್ಲಿ ತಂದೆ ತಿಪ್ಪೇಶ್ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ. ಬೆನ್ನು ಪಕ್ಕೆಗೆ ಹೊಡೆದಿದ್ದು, ಮಗ ಮೂರ್ಛೆ ಹೋಗಿದ್ದಾನೆ. ತಾಯಿ ತಕ್ಷಣ ಮಗನನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ಕರೆತಂದರು. ಅಷ್ಟರಲ್ಲಿ ಬಾಲಕ ಸಾವನ್ನಪ್ಪಿದ್ದಾನೆ.

Related Articles

ತಿಪ್ಪೇಶ್ ವಿರುದ್ಧ ಪತ್ನಿ ಗೌರಮ್ಮ ಭರಮಸಾಗರ ಠಾಣೆಯಲ್ಲಿ ದುರುದ್ದೇಶದಿಂದ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರು ನೀಡಿದ್ದಾರೆ. ತಿಪ್ಪೇಶ್ ಹಾಗೂ ಗೌರಮ್ಮ ಕೆಲ ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ತಿಪ್ಪೇಶ್ ತನ್ನ ತಾಯಿ ಶೆಟ್ಟಮ್ಮ ಮಾತು ಕೇಳಿ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button