ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆತ್ತ ತಂದೆಯೇ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಹೃದಯವಿದ್ರಾವಕ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೋಡಿಗೆಹಳ್ಳಿಯ ಧನಲಕ್ಷ್ಮೀ ಲೇಔಟ್ ನಲ್ಲಿ ಈ ದುರಂತ ಸಂಭವಿಸಿದೆ. 32 ವರ್ಷದ ಆಶಾ ತಂದೆಯಿಂದಲೇ ಕೊಲೆಯಾದ ಮಗಳು. ತಂದೆ ರಮೇಶ್ ಮಗಳ ತಲೆ ಮೇಲೆ ದೊಣ್ಣೆಯಿಂದ ಹೊಡೆದು ಹತ್ಯೆಗೈದಿದ್ದಾನೆ.
ಮಗಳು ಆಶಾ, ಮದುವೆಯ ಬಳಿಕ ಪತಿಯನ್ನು ಬಿಟ್ಟು ತವರು ಸೇರಿದ್ದಳು. ಇದೇ ವಿಚಾರವಾಗಿ ಅಪ್ಪ-ಮಗಳ ಮಧ್ಯೆ ಜಗಳ ಶುರುವಾಗಿದೆ. ಈ ವೇಳೆ ತಂದೆ ಮಗಳ ತಲೆಯ ಮೇಲೆ ದೊಣ್ಣೆಯಿಂದ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಕೋಡಿಗೆಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ