Latest

*ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ*

ಪ್ರಗತಿವಾಹಿನಿ ಸುದ್ದಿ: ಮಗ ಮಹಾಶಯನೊಬ್ಬ ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಆಶ್ರಯ ಬಡಾವಣೆಯಲ್ಲಿ ನಡೆದಿದೆ.

ತಂದೆ-ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಸುತ್ತಿಗೆಯಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಮುಸ್ತಫಾ ಬೇಗ್ (42) ಕೊಲೆಯಾದ ವ್ಯಕ್ತಿ. ಶಾಹಿದ್ ಬೇಗ್ ತಂದೆಯನ್ನೇ ಹತ್ಯೆಗೈದ ಮಗ.

ಶಿಕಾರಿಪುರ ಟೌನ್ ಪೊಲೀಸರು ಆರೋಪಿ ಮಗ ಶಾಹಿದ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Related Articles

Back to top button