*13 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ತಂದೆಯೇ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಹೇಯ ಕೃತ್ಯ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. ಮಗಳ ಮೇಲೆ ಅತ್ಯಾಚಾರವೆಸಗಿ ತಂದೆ ಪರಾರಿಯಾಗಿದ್ದಾನೆ. ಈ ಹಿಂದೆಯೂ ಮಗಳ ಮೇಲೆ ಅತ್ಯಾಚಾರಕ್ಕೆ ಆರೋಪಿ ಯತ್ನಿಸಿದ್ದ ಎನ್ನಲಾಗಿದೆ. ಬಾಲಕಿ ತಾಯಿ ತಿಪಟೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ತಂದೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ತಂದೆಗಾಗಿ ಹುಡುಕಾಟ ನಡೆಸಲಾಗಿದೆ. *ರೈಲು ಬೋಗಿಯಲ್ಲಿ ಕೊಳೆತ ಸ್ಥಿಯಲ್ಲಿ ಮಹಿಳೆಯ ಶವ ಪತ್ತೆ *