
ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರವೆಸಗಿ ಆಕೆಯನ್ನು ತಂದೆಯೇ ಗರ್ಭವತಿಯನ್ನಾಗಿ ಮಾಡಿರುವ ವಿಕೃತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ನಡೆದಿದೆ.
ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲಿಸರು ಕಾಮುಕ ತಂದೆಯನ್ನು ಬಂಧಿಸಿದ್ದಾರೆ. 55 ವರ್ಷದ ಕೂಲಿ ಕಾರ್ಮಿಕ ಬಂಧಿತ ಆರೋಪಿ.
ಪ್ರೌಢ ಶಾಲೆಯಲ್ಲಿ ಓದುತ್ತಿದ್ದ ತನ್ನ ಮಗಳ ಮೇಲೆ 6 ತಿಂಗಳ ಹಿಂದೆ ಮನೆಯಲ್ಲಿಯೇ ಅತ್ಯಾಚಾರವೆಸಗಿದ್ದ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರಾದ ಕಾರಣ ಮಂಘಲುರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತಪಾಸಣೆ ವೇಳೆ ಬಾಲಕಿ ಗರ್ಭಿಣಿ ಎಂಬುದು ಗೊತ್ತಾಗಿದೆ. ವಿಚಾರಣೆ ನಡೆಸಿದಾಗ ತಂದೆಯೇ ಈ ಕೃತ್ಯವೆಸಗಿದ್ದಾಗಿ ಹೇಳಿದ್ದಾಳೆ.
ಮೂಡಬಿದರೆ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ