Kannada NewsKarnataka NewsLatest

*ಮಗಳ ಮೇಲೆಯೇ ಅತ್ಯಾಚಾರ; ಅಪರಾಧಿ ತಂದೆಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಗಳ ಮೇಲೆಯೇ ತಂದೆಯೊಬ್ಬ ಪೈಶಾಕಿಕ ಕೃತ್ಯವೆಸಗಿರುವ ಘಟನೆಗೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ 20 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ.

2022ರಲ್ಲಿ ಮಗಳ ಮೇಲೆಯೇ ತಂದೆಯೊಬ್ಬ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ್ದ ಪ್ರಕರನ ಸಂಬಂಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಅಂದಿನ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಎನ್.ಲೋಹಿತ್ ಪ್ರಕರಣದ ತನಿಖೆ ನಡೆಸಿ ಐದನೇ ಅಧಿಕ ಮತ್ತು ಸತ್ರ ಪೋಕ್ಸೋ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಪೋಕ್ಸೋ ಕೋರ್ಟ್ ನ್ಯಾಯಾಧೀಶೆ ಎ.ನರಸಮ್ಮ. ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ನೊಂದ ಬಾಲಕಿಗೆ ಜಿಲ್ಲಾ ಮತ್ತು ಕಾನೂನು ಪ್ರಾಧಿಕಾರದಿಂದ 7 ಲಕ್ಷ ಪರಿಹರ ನೀಡುವಂತೆ ಸೂಚಿಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button