Kannada NewsLatest

*ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ: ರಾಜ್ಯದಲ್ಲಿಯೇ ನಡೆದ ಪೈಶಾಚಿಕ ಕೃತ್ಯ*

ಪ್ರಗತಿವಾಹಿನಿ ಸುದ್ದಿ: ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ಇಲ್ಲೊಂದು ಘಟನೆಯಲ್ಲಿ ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿರುವ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ.

Home add -Advt

ಮಗಳ ರಕ್ಷಣೆ ಮಾಡಬೇಕಿದ್ದ ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಹೇಯ ಕೃತ್ಯವೆಸಗಿದ್ದಾನೆ. 14 ವರ್ಷದ ಮಗಳ ಮೇಲೆ ತಂದೆ ಅತ್ಯಾಚಾರವೆಸಗಿದ್ದು, ಆಕೆ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊರ ರಾಜ್ಯದಿಂದ ಬಂದಿದ್ದ ಕುಟುಂಬವೊಂದು 8 ತಿಂಗಳ ಹಿಂದೆ ಕೂಲಿಕೆಲಸಕ್ಕಾಗಿ ಹೊನ್ನವಳ್ಳಿಯಲ್ಲಿ ವಾಸವಾಗಿತ್ತು. ಇತ್ತೀಚೆಗೆ ಬಾಲಕಿ ಆರೋಗ್ಯದಲ್ಲಿ ತುಂಬಾ ಏರುಪೇರಾಗಿತ್ತು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಹಾಗೂ ಅತ್ಯಾಚಾರವೆಸಗಿರುವ ವಿಷಯ ಬೆಳಕಿಗೆ ಬಂದಿದೆ.

ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದು, ತಂದೆಯಿಂದಲೇ ಗರ್ಭವತಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಪೋಕ್ಸೋ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.


Related Articles

Back to top button