CrimeKarnataka NewsLatest

*BREAKING: ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯವೇ ತಲೆ ತಗ್ಗಿಸುವಂತಹ ಹೇಯ ಘಟನೆ ಬೆಳಕಿಗೆ ಬಂದಿದೆ. ಕುಡಿತದ ದಾಸನಾಗಿದ್ದ ತಂದೆಯೊಬ್ಬ ಕಂಠಪೂರ್ತಿ ಕುಡಿದು ಬಂದು ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದಾನೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಮಗಳ ಮೇಲೆ ತಂದೆ ಅತ್ಯಾಚಾರವೆಸಗಿದ್ದಾನೆ. ಘಟನೆಯ ಬಳಿಕ ಬಾಲಕಿ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಅಂಕೋಲಾ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button