Kannada NewsKarnataka NewsPolitics

*ಯತ್ನಾಳ್ ಭೇಟಿಯಾದ ಬಿ.ವೈ.ವಿಜಯೇಂದ್ರ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ಬಿ.ವೈ.ವಿಜಯೇಂದ್ರ ಹುಬ್ಬಳ್ಳಿಯಲ್ಲಿ ಶಾಸಕ ಯತ್ನಾಳ್ ಅವರನ್ನು ಎರಡು ಬಾರಿ ಭೇಟಿಯಾಗಿದ್ದಾರೆ. ಇದು ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಕರೆದುಕೊಳ್ಳುವ ನಿಟ್ಟಿನಲ್ಲಿ ನಡೆದ ಭೇಟಿಯೇ ಎಂಬ ಚರ್ಚೆ ಕೂಡ ಆರಂಭವಾಗಿದೆ.

ಯತ್ನಾಳ್ ಭೇಟಿಯಾದ ವಿಚಾರವಾಗಿ ಬಿ.ವೈ.ವಿಜಯೇಂದ್ರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಹುಬ್ಬಳ್ಳಿಗೆ ತೆರಳಿದ್ದ ವೇಳೆ ಜೈನ ಮುನಿಗಳ ಧಾರ್ಮಿಕ ಸಭೆಯಲ್ಲಿ ಇಬ್ಬರೂ ಭಾಗಿಯಾಗಿದ್ದೆವು. ಬಳಿಕ ಅನಿರೀಕ್ಷಿತವಾಗಿ ಸ್ನೇಹಿತರೊಬ್ಬರ ಮನೆಯಲ್ಲಿ ಭೇಟಿಯಾದೆವು. ಮುಂದೇನು ಆಗುತ್ತದೆ ಎಂಬುದನ್ನು ನೋಡೋಣ ಎಂದು ವಿಜಯೇಂದ್ರ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರ ವಿರುದ್ಧ ನಿರಂತರ ಆರೋಪ, ಬಹಿರಂಗವಾಗಿ ತೀವ್ರ ಟೀಕೆಗಳನ್ನು ಮಾಡುತ್ತಿದ್ದ ಯತ್ನಾಳ್ ಅವರನ್ನು ವಿಜಯೇಂದ್ರ ಭೇಟಿಯಾಗಿರುವುದು ಸಹಜವಾಗಿ ಚರ್ಚೆಗೆ ಕಾರಣವಾಗಿದೆ.

ಯತ್ನಾಳ್ ಭೇಟಿಯ ಮುಂದಿನ ಬೆಳವಣಿಗೆಗಳ ಬಗ್ಗೆ ಈಗಲೇ ಯಾವುದೇ ನಿರ್ಧಾರಕ್ಕೆ ಬರುವ ಬದಲು, ಮುಂದೇನು ಆಗುತ್ತದೆ ಎಂಬುದನ್ನು ಕಾದು ನೋಡೋಣ ಎಂದು ವಿಜಯೇಂದ್ರ ತಿಳಿಸಿದ್ದಾರೆ.

Related Articles

Back to top button