ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ನಡೆಯಬೇಕಿದ್ದ ಎಫ್ ಡಿಎ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 14 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿಗಳಾದ ಚಂದ್ರು ಹಾಗೂ ರಾಚಪ್ಪ ಎಂಬುವವರನ್ನು ನಿನ್ನೆ ರಾತ್ರಿ ಬಂಧಿಸಲಾಗಿತ್ತು. ಇದೀಗ ಅವರ ಮೊಬೈಲ್ ಮಾಹಿತಿ ಆಧರಿಸಿ ಇನ್ನೂ ಹಲವರನ್ನು ಬಂಧಿಸಲಾಗಿದ್ದು, ಒಟ್ಟು 14 ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರ ಬಳಿಯಿದ್ದ 35 ಲಕ್ಷ ಹಣ, 1 ಎರ್ಟಿಗಾ ಕಾರು, 1 ಬೊಲೆರೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ಹಲವು ಜಿಲ್ಲೆಗಳ ಜೊತೆ ಸಂಪರ್ಕ ಹೊಂದಿದ್ದು, 10 ಲಕ್ಷ ರೂಪಾಯಿಗೆ ಪ್ರಶ್ನೆ ಪತ್ರಿಕೆ ಮಾರಾಟ ಮಾಡುತ್ತಿದ್ದರು. ಆನ್ ಲೈನ್ ಮೂಲಕವೂ ಡೀಲ್ ಮಾಡುತ್ತಿದ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ