
ಪ್ರಗತಿವಾಹಿನಿ ಸುದ್ದಿ: ಬಿಇ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.
ರಾಯಚೂರು ಮೂಲದ ತೇಜಸ್ವಿನಿ (19) ಮೃತ ವಿದ್ಯಾರ್ಥಿನಿ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ ಹಾಸ್ಟೆಲ್ ನಲ್ಲಿ ಇದ್ದಳು. 6 ವಿಷಯ ಬ್ಯಾಕ್ ಲಾಗ್ ಇದೆ. ಓದಲು ಇಷ್ಟವಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.