
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಮತ್ತೆ ಪ್ರವಾಹದ ಆತಂಕ ಶುರುವಾಗಿದೆ.
ಭಾರಿ ಮಳೆಗೆ ವೇದಗಂಗಾ, ದೂದಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಒಂದು ತಿಂಗಳಲ್ಲಿ ಮೂರನೇ ಬಾರಿಗೆ ಆರು ಸಂಪರ್ಕ ಸೇತುವೆಗಳು ಮುಳುಗಡೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಅಕ್ಕೋಳ-ಸಿದ್ನಾಳ, ಜತ್ರಾಟ-ಭೀವಶಿ ಸೇತುವೆ ಜಲಾವೃತವಾಗಿದೆ. ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್, ಬೋಜವಾಡಿ-ಕುನ್ನೂರ, ಬೋಜ್- ಕುನ್ನೂರ, ಮಲ್ಲಿಕವಾಡ-ದತ್ತವಾಡ ಸೇತುವೆ ಮುಳುಗಡೆಯಾಗಿದೆ. ಸೇತುವೆ ಎರಡು ಬದಿಯಲ್ಲಿ ಬ್ಯಾರಿಕೆಡ್ ಹಾಕಿ ಸಂಚಾರ ನಿಷೇಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ