Belagavi NewsBelgaum NewsKannada NewsKarnataka NewsNationalTravelWorld

*ಯುದ್ಧದ ಭೀತಿ: ಬೆಳಗಾವಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ​ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ. 

​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ.  

​ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.  

ಜಿಲ್ಲಾಡಳಿತದ ಕ್ರಮಗಳು 

Home add -Advt

​ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ.  

​ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.  

​ಸಹಾಯವಾಣಿ ಸಂಖ್ಯೆಗಳಿಗೆ ಬೆಳಗಾವಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಸಂಪರ್ಕಿಸಬಹುದು.

​ಬೆಳಗಾವಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ  0831-2407290,ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ  080-22340676, 080-22253707 , ಟೋಲ್ ಫ್ರೀ ಸಂಖ್ಯೆ: 1070 ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು.

ಸಾರ್ವಜನಿಕರಿಗೆ ಪ್ರಮುಖ ಸೂಚನೆಗಳು

​ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.  

​ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆ ಮಾಡಬೇಕು ಅಥವಾ ‘ಸಾರಥಿ ಸಹಾಯತಾ’ (Sarthi Sahayata) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು.  

​ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ (FRRO) ಕಚೇರಿಯನ್ನು ಸಂಪರ್ಕಿಸಬೇಕೆಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಶನ್  ಇವರು ತಿಳಿಸಿದ್ದಾರೆ.

Related Articles

Back to top button