Belagavi NewsBelgaum News

*ಮಳೆ ಅಬ್ಬರಕ್ಕೆ ಬೆಳಗಾವಿಯಲ್ಲಿ ಕುಸಿದು ಬಿದ್ದ ಮನೆ ಗೋಡೆ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಅನಾಹುತಗಳು ಸಂಭವಿಸುತ್ತಿವೆ. ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

Home add -Advt

ವರುಣಾರ್ಭಟಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಬೆಳಗವೈ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಜತ್ರಾಟ್ ವೇಸ್ ನಲ್ಲಿ ತಡ ರತರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದಿದ್ದು, ಪರಿಣಾಮ ಮನೆ ಪಕ್ಕದ ಶೆಡ್ ನಲ್ಲಿ ವಾಸವಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಶೆಡ್ ಪಕ್ಕದ ಮನೆಯ ಗೋಡೆ ಕುಸಿದು ಶೆಡ್ ಮೇಲೆ ಬಿದ್ದಿದೆ. ಶೆಡ್ ನಲ್ಲಿ ವಾಸವಾಗಿದ್ದ ತಿರುಪತಿ (45) ಎಂಬುವವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button