
ಪ್ರಗತಿವಾಹಿನಿ ಸುದ್ದಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಚಿಕಿತ್ಸೆ ಫಲಿಸದೆ ಅಧಿಕಾರಿ ಸಾವನ್ನಪ್ಪಿದ್ದಾರೆ.
ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಮೃತ ಅಧಿಕಾರಿ. ರೇಣುಕಾ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದರು. ಇಂದು ಬೆಳಗ್ಗೆ ರೇಣುಕಾ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆ ಎನ್ನುವಾತ ಅವರನ್ನು ಅಡ್ಡಗಟ್ಟಿ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ ಎನ್ನಲಾಗಿದೆ.
ಗಂಭೀರ ಗಾಯಗೊಂಡು ಒದ್ದಾಡುತ್ತಿದ್ದ ರೇಣುಕಾ ಅವರನ್ನು ಸ್ಥಳೀಯರು ತಕ್ಷಣವೇ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ರೇಣುಕಾ ಸಾವನ್ನಪ್ಪಿದ್ದಾರೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.