Karnataka News

*ಫೆಂಗಾಲ್ ಚಂಡಮಾರುತ: ರಾಜ್ಯದಲ್ಲಿ ಮೋಡ ಕವಿದ ವಾತಾವರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿರುವ ಫೆಂಗಾಲ್ ಚಂಡಮಾರುತವು ಡಿಸೆಂಬರ್ 1ರಂದು ಪಾಂಡಿಚೇರಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 2 ಹಾಗೂ 3 ರಂದು ತಮಿಳುನಾಡು – ಕರ್ನಾಟಕ ಗಡಿ ಭಾಗಗಳಲ್ಲಿ ಸಾಗಿ ಕೇರಳದ ಕೋಜಿಕ್ಕೊಡು ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.

ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದರೆ ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.

ಚಂಡಮಾರುತವು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿದ ನಂತರವೂ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button